Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:25 - ಕನ್ನಡ ಸಮಕಾಲಿಕ ಅನುವಾದ

25 “ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:25
24 ತಿಳಿವುಗಳ ಹೋಲಿಕೆ  

ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.


ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.


ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.


ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.


ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”


ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಯೆಹೋವ ದೇವರು ಮಾತನಾಡದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ’ ಎಂದು ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ.


ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು