ಯೆರೆಮೀಯ 23:26 - ಕನ್ನಡ ಸಮಕಾಲಿಕ ಅನುವಾದ26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇವರ ಪೂರ್ವಜರು ಬಾಳ್‍ದೇವತೆಯನ್ನು ಸೇರಿಕೊಂಡು ನನ್ನ ಹೆಸರನ್ನು ಮರೆತುಬಿಟ್ಟರು. ಅದೇ ಪ್ರಕಾರ ಈ ಪ್ರವಾದಿಗಳು ಸ್ವಕಲ್ಪಿತ ಸುಳ್ಳು ಕನಸುಗಳನ್ನು ಒಬ್ಬರಿಗೊಬ್ಬರು ತಿಳಿಸುವುದರ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇವರ ಪಿತೃಗಳು ಬಾಳನನ್ನು ಸೇರಿ ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ ತಾವು ತಮ್ಮ ನೆರೆಹೊರೆಯವರಿಗೆ ತಿಳಿಸುವ ತಮ್ಮ ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ. ಅಧ್ಯಾಯವನ್ನು ನೋಡಿ |