ಯೆರೆಮೀಯ 23:33 - ಕನ್ನಡ ಸಮಕಾಲಿಕ ಅನುವಾದ33 “ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |