Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:34 - ಕನ್ನಡ ಸಮಕಾಲಿಕ ಅನುವಾದ

34 ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಸರ್ವೇಶ್ವರನ ಹೊರೆ” ಎಂದು ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ಹೇಳಿದ್ದೇ ಆದರೆ ನಾನು ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾವನು - ಯೆಹೋವನ ಭಾರ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಒಬ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದ್ದರಿಂದ ನಾನು ಆ ವ್ಯಕ್ತಿಯನ್ನು ಮತ್ತು ಅವರ ಇಡೀ ಕುಟುಂಬವನ್ನು ದಂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:34
4 ತಿಳಿವುಗಳ ಹೋಲಿಕೆ  

ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.


ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”


ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು