ಯೆರೆಮೀಯ 23:5 - ಕನ್ನಡ ಸಮಕಾಲಿಕ ಅನುವಾದ5 “ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.