ಯೆರೆಮೀಯ 23:8 - ಕನ್ನಡ ಸಮಕಾಲಿಕ ಅನುವಾದ8 ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.” ಅಧ್ಯಾಯವನ್ನು ನೋಡಿ |