Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:10 - ಕನ್ನಡ ಸಮಕಾಲಿಕ ಅನುವಾದ

10 ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:10
27 ತಿಳಿವುಗಳ ಹೋಲಿಕೆ  

ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?


“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.


ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,


ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.


ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಈಜಿಪ್ಟಿಗೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನಿಡುವ ಮನುಷ್ಯರಿಗೆಲ್ಲಾ ಹೀಗಾಗುವುದು. ಅವರು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವರು. ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವುದಿಲ್ಲ.’


ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.


ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?”


ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.


“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು