Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:6 - ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:6
28 ತಿಳಿವುಗಳ ಹೋಲಿಕೆ  

‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.


ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


“ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಎಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಮಾಡಿರಿ,” ಎಂದು ಪ್ರಾರ್ಥಿಸಿದೆ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು.


ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’


ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು.


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


“ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು