Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:9 - ಕನ್ನಡ ಸಮಕಾಲಿಕ ಅನುವಾದ

9 ‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:9
29 ತಿಳಿವುಗಳ ಹೋಲಿಕೆ  

ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು.


ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು