Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:11 - ಕನ್ನಡ ಸಮಕಾಲಿಕ ಅನುವಾದ

11 ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:11
23 ತಿಳಿವುಗಳ ಹೋಲಿಕೆ  

ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?


“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”


ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು. ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.


ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು.


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”


ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು.


ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು