Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:15 - ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:15
27 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.


ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.


ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ, ಭೂಮಿಯ ದ್ರಾಕ್ಷಿಹಣ್ಣನ್ನು ಕೂಡಿಸಿ, ದೇವರ ಕೋಪವೆಂಬ ದೊಡ್ಡ ದ್ರಾಕ್ಷಿಯ ತೊಟ್ಟಿಯಲ್ಲಿ ಹಾಕಿದನು.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.


ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.”


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.


ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:


“ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. ಅದೇ ನಿನಗೆ ಹೆಚ್ಚಾಗುವುದು.


ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶವೂ ಆಗುವುದು. ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ.


ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.


ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು