Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:17 - ಕನ್ನಡ ಸಮಕಾಲಿಕ ಅನುವಾದ

17 ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಸರ್ವೇಶ್ವರನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡೆ. ಸರ್ವೇಶ್ವರ ಯಾವ ರಾಷ್ಟ್ರಗಳ ಬಳಿಗೆ ನನ್ನನ್ನು ಕಳಿಸಿದರೋ, ಆ ಎಲ್ಲ ರಾಷ್ಟ್ರಗಳು ಅದರಿಂದ ಕುಡಿಯುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಯೆಹೋವನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಂಡೆನು. ನಾನು ಆ ಜನಾಂಗಗಳ ಬಳಿಗೆ ಹೋದೆನು ಮತ್ತು ಆ ಜನರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:17
9 ತಿಳಿವುಗಳ ಹೋಲಿಕೆ  

ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು.


ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.


ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.


ಆಗ ನಾನು ನನ್ನ ಬಾಯನ್ನು ತೆರೆದೆನು, ಅವರು ನನಗೆ ತಿನ್ನುವುದಕ್ಕೆ ಸುರುಳಿಯನ್ನು ಕೊಟ್ಟರು.


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


“ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು