ಯೆರೆಮೀಯ 25:27 - ಕನ್ನಡ ಸಮಕಾಲಿಕ ಅನುವಾದ27 “ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 [ಇದಲ್ಲದೆ ಈ ಅಪ್ಪಣೆಯಾಯಿತು] - ನೀನು ಅವರಿಗೆ ನುಡಿಯತಕ್ಕದ್ದೇನಂದರೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’ ಅಧ್ಯಾಯವನ್ನು ನೋಡಿ |