Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:30 - ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು - ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ದನಿಗೈಯುವನು; ಆತನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು; ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:30
25 ತಿಳಿವುಗಳ ಹೋಲಿಕೆ  

ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”


ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.


ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.


ಆದಕಾರಣ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರ್ ಪಟ್ಟಣದೊಂದಿಗೆ ಅಳುವೆನು. ಓ ಹೆಷ್ಬೋನ್ ಮತ್ತು ಎಲೆಯಾಲೆ ಪಟ್ಟಣಗಳೇ, ನಿಮ್ಮನ್ನು ನನ್ನ ಕಣ್ಣೀರಿನಿಂದ ತೋಯಿಸುವೆನು! ಏಕೆಂದರೆ ಶತ್ರುಗಳು ಬಿದ್ದುಹೋದ ನಿಮ್ಮ ಬೇಸಿಗೆಯ ಫಲಗಳಿಗೂ, ಬೆಳೆಗಳಿಗೂ ಆರ್ಭಟಿಸುತ್ತಾರೆ.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.


ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.


“ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯ ಸ್ಥಳವಾಗಿರುವುದು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ; ಇಲ್ಲಿಯೇ ಸಿಂಹಾಸನಾರೂಢನಾಗಿರುವೆನು.


ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.


ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ.


ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.


ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ನಿಮ್ಮ ಸೈನ್ಯದ ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀವು ಏಳುವಾಗ ರಾಜ್ಯಗಳು ಚದರಿ ಹೋಗುತ್ತವೆ.


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು