ಯೆರೆಮೀಯ 25:31 - ಕನ್ನಡ ಸಮಕಾಲಿಕ ಅನುವಾದ31 ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಶಬ್ದವು ಭೂವಿುಯ ಕಟ್ಟ ಕಡೆಯವರೆಗೆ ವ್ಯಾಪಿಸುವದು; ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ; ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು; ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು. ಅಧ್ಯಾಯವನ್ನು ನೋಡಿ |