ಯೆರೆಮೀಯ 25:32 - ಕನ್ನಡ ಸಮಕಾಲಿಕ ಅನುವಾದ32 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.” ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.