Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:33 - ಕನ್ನಡ ಸಮಕಾಲಿಕ ಅನುವಾದ

33 ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣಿಡರು, ಭೂವಿುಯ ಮೇಲೆ ಗೊಬ್ಬರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:33
19 ತಿಳಿವುಗಳ ಹೋಲಿಕೆ  

ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.


ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ. ಅವರನ್ನು ಹೂಳಿಡುವವನೊಬ್ಬನೂ ಇಲ್ಲ.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು.


ಕೂಷ್ ದೇಶದವರೇ, ನೀವೂ ಸಹ ನನ್ನ ಖಡ್ಗದಿಂದ ಹತರಾಗುವಿರಿ.


ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.


ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.


ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.


“ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.


ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು