ಯೆರೆಮೀಯ 25:34 - ಕನ್ನಡ ಸಮಕಾಲಿಕ ಅನುವಾದ34 ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ. ಅಧ್ಯಾಯವನ್ನು ನೋಡಿ |