Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:36 - ಕನ್ನಡ ಸಮಕಾಲಿಕ ಅನುವಾದ

36 ಕುರುಬರ ಕೂಗಿನ ಶಬ್ದವು, ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳಿಸುತ್ತಿದೆ. ಏಕೆಂದರೆ ಯೆಹೋವ ದೇವರು ಅವರ ಮೇವಿನ ಸ್ಥಳವನ್ನು ಹಾಳು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅಕಟಕಟಾ, ಕುರಿಗಾಹಿಗಳ ಕೂಗಾಟ ಮೇಷಪಾಲರ ಕಿರುಚಾಟ ಸರ್ವೇಶ್ವರನಿಂದಲೆ ಆ ಹುಲ್ಲುಗಾವಲಿನ ವಿನಾಶ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ಮಣಿಗಳ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಕುರುಬರ ಕೂಗಾಟ ನನಗೆ ಕೇಳುತ್ತಿದೆ. ಕುರಿಗಳ ಗೋಳಾಟ ನನಗೆ ಕೇಳಿಬರುತ್ತಿದೆ. ಯೆಹೋವನು ಅವರ ದೇಶವನ್ನು ನಾಶಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:36
6 ತಿಳಿವುಗಳ ಹೋಲಿಕೆ  

ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.


ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.


ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು.


ಸಮಾಧಾನವುಳ್ಳ ಗೋಮಾಳಗಳು ಯೆಹೋವ ದೇವರ ಕೋಪದ ದೆಸೆಯಿಂದ ಕೆಡವಿಬಿದ್ದವು.


ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು