Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:38 - ಕನ್ನಡ ಸಮಕಾಲಿಕ ಅನುವಾದ

38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:38
15 ತಿಳಿವುಗಳ ಹೋಲಿಕೆ  

ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.


ನನ್ನ ಸಂಗಡ ಮಾತನಾಡಿದ ದೂತನು ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು,


“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.


ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು