Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:4 - ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:4
24 ತಿಳಿವುಗಳ ಹೋಲಿಕೆ  

ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”


ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.


ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”


ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”


ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.


ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.


“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.


ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.


ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು