ಯೆರೆಮೀಯ 25:5 - ಕನ್ನಡ ಸಮಕಾಲಿಕ ಅನುವಾದ5 ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.
“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.