ಯೆರೆಮೀಯ 25:9 - ಕನ್ನಡ ಸಮಕಾಲಿಕ ಅನುವಾದ9 ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿ |