Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜುದೇಯದ ನಾಯಕರಿಗೂ ಈ ಸಮಾಚಾರ ಮುಟ್ಟಿತು. ಅವರು ಅರಮನೆಯಿಂದ ಧಾವಿಸಿಬಂದು ಸರ್ವೇಶ್ವರನಾಲಯದ ಹೊಸ ಬಾಗಿಲ ಬಳಿ ಆಸೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಹತ್ತಿಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕೂತುಕೊಂಡಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:10
15 ತಿಳಿವುಗಳ ಹೋಲಿಕೆ  

ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು.


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


“ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.


ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.


ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.


ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.


ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.


ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.


ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು