ಯೆರೆಮೀಯ 26:12 - ಕನ್ನಡ ಸಮಕಾಲಿಕ ಅನುವಾದ12 ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು - ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು. ಅಧ್ಯಾಯವನ್ನು ನೋಡಿ |
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”