ಯೆರೆಮೀಯ 26:5 - ಕನ್ನಡ ಸಮಕಾಲಿಕ ಅನುವಾದ5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |
“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.