ಯೆರೆಮೀಯ 27:11 - ಕನ್ನಡ ಸಮಕಾಲಿಕ ಅನುವಾದ11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವದೋ ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಗೆಯ್ದು ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |