Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:21 - ಕನ್ನಡ ಸಮಕಾಲಿಕ ಅನುವಾದ

21 ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನ ಆಲಯದಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆಯೂ ರಾಜನ ಅರಮನೆಯಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ಉಳಿದಿರುವ ವಸ್ತುಗಳ ಬಗ್ಗೆಯೂ ಹೀಗೆನ್ನುತ್ತಾನೆ: ‘ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:21
9 ತಿಳಿವುಗಳ ಹೋಲಿಕೆ  

ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.


‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”


ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.


ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.


ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.


ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.


ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು.


ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು