Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:22 - ಕನ್ನಡ ಸಮಕಾಲಿಕ ಅನುವಾದ

22 ‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವ ತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವು ಬಾಬೆಲಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:22
24 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.


ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ:


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.


ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು