Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:3 - ಕನ್ನಡ ಸಮಕಾಲಿಕ ಅನುವಾದ

3 ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇವಿುನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋವಿುನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:3
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


“ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”


‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:


ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.


ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು