Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:5 - ಕನ್ನಡ ಸಮಕಾಲಿಕ ಅನುವಾದ

5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:5
54 ತಿಳಿವುಗಳ ಹೋಲಿಕೆ  

“ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು.


ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.


ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.


“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


“ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ.


“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.


ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ?


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಅವುಗಳನ್ನು ಕರೆಯಲು, ಅವು ಒಟ್ಟಾಗಿ ನಿಂತುಕೊಂಡವು.


“ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.


ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ಭೂಮಿಯ ಮೇಲಿರುವ ಯಾವುದೊಂದು ಮೃಗದ ಹೋಲಿಕೆಯನ್ನೂ, ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವುದೊಂದು ಪಕ್ಷಿಯ ಹೋಲಿಕೆಯನ್ನೂ, ಭೂಮಿಯ ಮೇಲೆ ಹರಿದಾಡುವಂಥ ಕ್ರಿಮಿಕೀಟ ಯಾವುದೊಂದರ ಹೋಲಿಕೆಯನ್ನೂ,


ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.


ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.


ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.


ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.


“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.


‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,


“ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು.


ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.


ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.


ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು