ಯೆರೆಮೀಯ 27:6 - ಕನ್ನಡ ಸಮಕಾಲಿಕ ಅನುವಾದ6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’
“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.