Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:1 - ಕನ್ನಡ ಸಮಕಾಲಿಕ ಅನುವಾದ

1 ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದೇ ವರುಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರುಷದ ಐದನೆಯ ತಿಂಗಳಲ್ಲಿ ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:1
22 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೋಷೀಯನ ಮಗನೂ, ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಯೆರೆಮೀಯನಿಗೆ ಬಂತು.


ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,


ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.


ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.


ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.


ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.


ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.


ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”


ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,


ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.


ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:


ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು.


“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.


ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,


“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು