ಯೆರೆಮೀಯ 28:16 - ಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನ್ನನ್ನು ಭೂವಿುಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರುಷ ಸಾಯುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’” ಅಧ್ಯಾಯವನ್ನು ನೋಡಿ |