ಯೆರೆಮೀಯ 29:13 - ಕನ್ನಡ ಸಮಕಾಲಿಕ ಅನುವಾದ13 ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.