Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನೀವೋ, ‘ಸರ್ವೇಶ್ವರ ನಮಗಾಗಿ ಬಾಬಿಲೋನಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾರೆ’ ಎಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 (ನೀವೋ - ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ ಅಂದುಕೊಂಡಿದ್ದೀರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆದರೆ ಯೆಹೋವನು ನಮಗೆ ಬಾಬಿಲೋನಿನಲ್ಲಿಯೇ ಪ್ರವಾದಿಗಳನ್ನು ಕೊಟ್ಟಿದ್ದಾನೆ” ಎಂದು ನೀವು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:15
6 ತಿಳಿವುಗಳ ಹೋಲಿಕೆ  

ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.


ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು