Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:17 - ಕನ್ನಡ ಸಮಕಾಲಿಕ ಅನುವಾದ

17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಹಾ, ನಾನು ಅವರ ಮೇಲೆ ಖಡ್ಗಕ್ಷಾಮವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:17
14 ತಿಳಿವುಗಳ ಹೋಲಿಕೆ  

ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.


ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.


ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.


ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.


“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.


ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು