Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:19 - ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:19
14 ತಿಳಿವುಗಳ ಹೋಲಿಕೆ  

ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.


ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು