Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:21 - ಕನ್ನಡ ಸಮಕಾಲಿಕ ಅನುವಾದ

21 ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:21
8 ತಿಳಿವುಗಳ ಹೋಲಿಕೆ  

ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.


ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ”


ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು