ಯೆರೆಮೀಯ 29:22 - ಕನ್ನಡ ಸಮಕಾಲಿಕ ಅನುವಾದ22 ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’ ಅಧ್ಯಾಯವನ್ನು ನೋಡಿ |