23 ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.
23 ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”
23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.
23 ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”
ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.
ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.
ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”
ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು.
ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.
“ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ,
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.