ಯೆರೆಮೀಯ 29:25 - ಕನ್ನಡ ಸಮಕಾಲಿಕ ಅನುವಾದ25 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಯೆರೂಸಲೇವಿುನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನ ಮೇಲೆ ಕಳುಹಿಸಿದ ಕಾಗದದಲ್ಲಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ. ಅಧ್ಯಾಯವನ್ನು ನೋಡಿ |