Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:32 - ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:32
24 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.


ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”


ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆ ಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು, ಇಸ್ರಾಯೇಲರ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಇದನ್ನು ನುಡಿದಿದ್ದಾರೆ,” ಎಂದನು.


ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ”


“ಅವರಿಗೆ ವಿರುದ್ಧವಾಗಿ ಏಳುತ್ತೇನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಬಾಬಿಲೋನಿನಿಂದ ಆಕೆಯ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಮಕ್ಕಳನ್ನೂ ಅದರ ಸಂತತಿಯವರನ್ನೂ ನಿರ್ಮೂಲ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ.


ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.


ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು:


ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,


ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು