Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:6 - ಕನ್ನಡ ಸಮಕಾಲಿಕ ಅನುವಾದ

6 ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಂಸಾರಿಗಳಾಗಿ ಗಂಡುಹೆಣ್ಣು ಮಕ್ಕಳನ್ನು ಪಡೆಯಿರಿ; ನಿಮ್ಮ ಗಂಡುಗಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿರಿ; ಅವರೂ ಗಂಡು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:6
16 ತಿಳಿವುಗಳ ಹೋಲಿಕೆ  

ಅವನಿಗೆ ಮೂವತ್ತು ಮಂದಿ ಪುತ್ರರು, ಮೂವತ್ತು ಮಂದಿ ಪುತ್ರಿಯರು ಇದ್ದರು. ಪುತ್ರಿಯರನ್ನು ಹೊರಗೆ ಮದುವೆ ಮಾಡಿಕೊಟ್ಟನು; ಹೊರಗಿನಿಂದ ಮೂವತ್ತು ಮಂದಿ ಕನ್ಯೆಯರನ್ನು ತನ್ನ ಪುತ್ರರಿಗೆ ತೆಗೆದುಕೊಂಡನು. ಅವನು ಇಸ್ರಾಯೇಲಿಗೆ ಏಳು ವರ್ಷ ನ್ಯಾಯತೀರಿಸಿದನು.


ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.


ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವ ದೇವರು ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಹೆಂಡತಿಯಾಗಲಿ,” ಎಂದರು.


ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು.


ಶೆಕೆಮನು ತನ್ನ ತಂದೆ ಹಮೋರನಿಗೆ, “ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ಹೇಳು,” ಎಂದನು.


ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.


ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”


ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು