ಯೆರೆಮೀಯ 29:7 - ಕನ್ನಡ ಸಮಕಾಲಿಕ ಅನುವಾದ7 ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.” ಅಧ್ಯಾಯವನ್ನು ನೋಡಿ |