Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:1 - ಕನ್ನಡ ಸಮಕಾಲಿಕ ಅನುವಾದ

1 “ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:1
34 ತಿಳಿವುಗಳ ಹೋಲಿಕೆ  

ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ;


“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.


“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.


ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವ ಮಾಡಿ, ಅವನನ್ನು ಬಿಟ್ಟು, ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ಅಲ್ಲಿ ನಾಲ್ಕು ತಿಂಗಳಿದ್ದಳು.


ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.


ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.


“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.


ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


“ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು