Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:10 - ಕನ್ನಡ ಸಮಕಾಲಿಕ ಅನುವಾದ

10 ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲಿಗೆ ಇಷ್ಟೆಲ್ಲಾ ದಂಡನೆ ಆದರೂ ಅವಳ ಸೋದರಿಯಾದ ಯೆಹೂದ ತುಂಬುಹೃದಯದಿಂದ ನನ್ನಲ್ಲಿಗೆ ಬರಲಿಲ್ಲ. ಅವಳು ನನ್ನಲ್ಲಿಗೆ ತಿರುಗಿ ಬರುವ ನಟನೆಯನ್ನು ಮಾತ್ರ ಮಾಡಿದಳು. ಇದು ಯೆಹೋವನಾದ ನನ್ನ ನುಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:10
13 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.


ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು