ಯೆರೆಮೀಯ 3:13 - ಕನ್ನಡ ಸಮಕಾಲಿಕ ಅನುವಾದ13 ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು. ಅಧ್ಯಾಯವನ್ನು ನೋಡಿ |