Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:15 - ಕನ್ನಡ ಸಮಕಾಲಿಕ ಅನುವಾದ

15 ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:15
20 ತಿಳಿವುಗಳ ಹೋಲಿಕೆ  

ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?


ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.


ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.


“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು