ಯೆರೆಮೀಯ 3:2 - ಕನ್ನಡ ಸಮಕಾಲಿಕ ಅನುವಾದ2 “ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ. ಅಧ್ಯಾಯವನ್ನು ನೋಡಿ |